March 25, 2026

ಕಳ್ಳಂಬೆಳ್ಳ ಬಳಿ ಭೀಕರ ರಸ್ತೆ ಅಪಘಾತ: 9 ಮಂದಿ ಸ್ಥಳದಲ್ಲಿಯೇ ಮೃತ್ಯು, ಹಲವರು ಗಂಭೀರ ಗಾಯ

0
image_editor_output_image962398691-1661407057125.jpg

ತುಮಕೂರು : ಜಿಲ್ಲೆಯ ಶಿರಾ ತಾಲೂಕು ಕಳ್ಳಂಬೆಳ್ಳ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ 9 ಜನರು ಮೃತಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಗುರುವಾರ ಮುಂಜಾನೆ ಕ್ರೂಸರ್ ಗೆ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಕಳ್ಳಂಬೆಳ್ಳ ಬಳಿಯ ಬಾಳೇನಹಳ್ಳಿ ಬಳಿ ಈ ಭೀಕರ ಘಟನೆ ನಡೆದಿದೆ.

ರಾಯಚೂರು ಮತ್ತು ಮಾನ್ವಿ ಮೂಲದ ಜನರು ಕೂಲಿ ಅರಸಿ ಕ್ರೂಜರ್ ವಾಹನದಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದರು ಈ ವೇಳೆ
ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿದ್ದು,ತೀವ್ರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!