February 4, 2026

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ ವಿಚಾರ: ಗುಜರಾತ್‌ ಸರಕಾರಕ್ಕೆ ನೋಟಿಸ್‌ ಹೊರಡಿಸಿದ ಸುಪ್ರೀಂ ಕೋರ್ಟ್

0
image_editor_output_image-559353549-1661409248464.jpg

ಹೊಸದಿಲ್ಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ಆಲಿಸಿದೆ.

ಈ ಕುರಿತು ಗುಜರಾತ್‌ ಸರಕಾರಕ್ಕೆ ನೋಟಿಸ್‌ ಹೊರಡಿಸಿದೆ ಎಂದು ತಿಳಿದು ಬಂದಿದೆ. ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದೆ.

Leave a Reply

Your email address will not be published. Required fields are marked *

error: Content is protected !!