February 3, 2026

ಕಡಬದ ಎಡಮಂಗಲ ಗ್ರಾಮದಲ್ಲಿ ಪ್ರಾಚೀನ ಮಣ್ಣಿನ ಪರಿಕರಗಳು ಪತ್ತೆ

0
image_editor_output_image3243053-1661580353770.jpg

ಕಡಬ: ಇಲ್ಲಿನ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆಯಾಗಿದ್ದು, ಅದರಲ್ಲಿ ಪ್ರಾಚೀನ ಮಣ್ಣಿನ ಪರಿಕರಗಳು ಪತ್ತೆಯಾಗಿವೆ.

ಕಲ್ಲೆಂಬಿ ವಿಶ್ವನಾಥ ಗೌಡ ಅವರ ಅಡಿಕೆ ತೋಟ ಮಾಡುವ ಉದ್ದೇಶದಿಂದ ಗುಂಡಿ ತೆಗೆಯುವಾಗ ಈ ಗುಹೆ ಪತ್ತೆಯಾಗಿದೆ.

ಅಡಿಕೆ ತೋಟಕ್ಕೆ ಗುಂಡಿ ಅಗೆಯುವ ವೇಳೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿವೆ. ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆ ಕಂಡುಬಂದಿದೆ.

ಪರಿಕರ ಅಧ್ಯಯನ ಹಂತದಲ್ಲಿ ಹಿಂದಿನ ಕಾಲದಲ್ಲಿ ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!