February 3, 2026

ದುಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್‌ ಇರಿಸಿರುವ ಬೆದರಿಕೆ

0
image_editor_output_image1468486982-1661581437006.jpg

ಚೆನ್ನೈ: ದುಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್‌ ಇರಿಸಿರುವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಹುಸಿ ಬೆದರಿಕೆ ಎಂಬುದು ತಿಳಿದುಬಂದಿದೆ. ಬಾಂಬ್‌ ಬೆದರಿಕೆ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇದು ಯಾರೋ ಕಿಡಿಗೇಡಿಗಳ ಕೀಟಲೆಯ ಕೃತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಗೋ ವಿಮಾನವು ಚೆನ್ನೈ ವಿಮಾನ ನಿಲ್ದಾಣದಿಂದ ಶನಿವಾರ ಬೆಳಗ್ಗೆ 7.20ಕ್ಕೆ ಸುಮಾರು 170 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ದುಬೈನತ್ತ ಪ್ರಯಾಣ ಬೆಳೆಸಲು ಸಿದ್ಧವಾಗಿತ್ತು.

ವಿಮಾನ ನಿಲ್ದಾಣದ ಪೊಲೀಸ್‌ ಕಂಟ್ರೋಲ್‌ ರೂಂಗೆ ದುಬೈಗೆ ಹೊರಟಿರುವ ವಿಮಾನದಲ್ಲಿ ಸ್ಪೋಟಕಗಳನ್ನು ಇರಿಸಿರುವುದಾಗಿ ಅನಾಮಧೇಯ ಬೆದರಿಕೆ ಕರೆ ಬಂದಿತ್ತು. ಈ ಹಿನ್ನೆಲೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಕೈಗೊಂಡಿತ್ತು.

ಬಾಂಬ್‌ ಬೆದರಿಕೆಯಿಂದ ದುಬೈಗೆ ಪ್ರಯಾಣ ಬೆಳೆಸಲು ಸಾಧ್ಯವಾಗದ ಪ್ರಯಾಣಿಕರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನಾಮಧೇಯ ಕರೆ ಎಲ್ಲಿಂದ ಬಂದಿದ್ದೆಂದು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!