August 18, 2026

ರೈಲ್ವೆ ನಿಲ್ದಾಣದ ರಸ್ತೆಯ ಬದಿಯಲ್ಲಿ ಸಿಕ್ಕ ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಮೃತದೇಹ ಪತ್ತೆ

0
image_editor_output_image226067942-1661582524263.jpg

ಮುಂಬೈ: ರೈಲ್ವೆ ನಿಲ್ದಾಣದ ಬಳಿಯ ರಸ್ತೆಯ ಬದಿಯಲ್ಲಿ ಸಿಕ್ಕ ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನೈಗಾಂವ್‌ನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ವಂಶಿತಾ ಕನೈಯಾಲಾಲ್ ರಾಥೋಡ್ ಎಂದು ಗುರುತಿಸಲಾಗಿದೆ.

ದಾರಿಹೋಕರೊಬ್ಬರು ಬ್ಯಾಗ್ ಅನ್ನು ಗಮನಿಸಿ ವಾಲಿವ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಬ್ಯಾಗನ್ನು ತೆರೆದು ನೋಡಿದಾಗ ಅದರೊಳಗೆ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ತುಂಬಿಟ್ಟಿರುವುದು ಪತ್ತೆಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!