March 25, 2026

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ: ತಂದೆ-ಮಗನಿಗೆ ಗಾಯ

0
image_editor_output_image-1130057683-1661586164766

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಮಗು ಹಾಗೂ ತಂದೆ ಗಾಯಗೊಂಡಿರುವ ಘಟನೆ  ಬೆಳಿಗ್ಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಡ್ಡಹೊಳೆಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮಗು ಹಾಗೂ ಮಗುವಿನ ತಂದೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಈಚರ್ ಲಾರಿಯ ಚಾಲಕನಿಗೂ ಸಣ್ಣಪುಟ್ಟ ಗಾಯವಾಗಿದೆ ಎಂದು ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!