August 18, 2026

ಪುಂಜಾಲಕಟ್ಟೆ: ಎರಡು ಬೈಕ್ ಗಳ ನಡುವೆ ಅಪಘಾತ, ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಮೃತ್ಯು, ಇಬ್ಬರು ಗಂಭೀರ

0
image_editor_output_image-1809822135-1661751604521.jpg

ಬೆಳ್ತಂಗಡಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿಯಾಗಿದ್ದರು.

ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!