August 12, 2026

ವಿಟ್ಲ ಪದವಿ ಪೂರ್ವ ಕಾಲೇಜು ವಿಟ್ಲ “ರಾಷ್ಟೀಯ ಕ್ರೀಡಾ ದಿನಾಚರಣೆ”

0
image_editor_output_image1492666638-1661753043635.jpg

ವಿಟ್ಲ:ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸತತ ಮೂರು ಬಾರಿ ಬಂಗಾರದ ಪದಕ ತಂದುಕೊಟ್ಟ ವಿಶ್ವ ಕಂಡ ಅಪರೂಪದ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.

ಕ್ರೀಡೆಯಿಂದಾಗುವ ಅನುಕೂಲ ತೆಗಳನ್ನು ತಿಳಿಸಿ ಯುವ ಜನತೆಯಲ್ಲಿ ಕ್ರೀಡಾ ಪ್ರೇಮವನ್ನು ಹೆಚ್ಚಿಸುವುದೇ ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಕೆ ಹೇಳಿದರು.

ಇವರು ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು .

ಮೇಜರ್ ಧ್ಯಾನ್ ಚಂದ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಯನ್ನು ಸಲ್ಲಿಸಿ ವಿದ್ಯಾರ್ಥಿ ಗಳನ್ನುದ್ದೇಶಿಸಿ ಮಾತನಾಡಿದ ಇವರು ಇಂದಿನ ಬಿಡುವಿಲ್ಲದ ಯುಗದಲ್ಲಿ ಕೇವಲ ಮೊಬೈಲ್ ಗಳಿಗೆ ಸೀಮಿತವಾಗಿರುವ ಯುವ ಮನಸ್ಸುಗಳು ಕ್ರೀಡೆ ಮತ್ತು ವ್ಯಾಯಾ ಮದ ಕಡೆಗೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ ಗೌಡ ಕಾರ್ಯಕ್ರಮ ನಿರೂಪಿಸಿ ಉಪನ್ಯಾಸಕಿ ಆಶಾ ವಂದಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!