March 25, 2026

ಹಿಜಾಬ್ ಮೇಲಿನ ನಿಷೇಧ ವಿಚಾರ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

0
image_editor_output_image1023700876-1661761852351.jpg

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಎತ್ತಿಹಿಡಿದಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸೋಮವಾರ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಅರ್ಜಿಗಳ ಕುರಿತು ರಾಜ್ಯಕ್ಕೆ ನೋಟಿಸ್ ಜಾರಿಗೊಳಿಸಿತು. ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ಮುಂದೂಡಿಕೆಯನ್ನು ಕೋರಿದ ಕೆಲವು ಅರ್ಜಿದಾರರನ್ನು ಪೀಠವು ತರಾಟೆಗೆ ತೆಗೆದುಕೊಂಡಿತು. ಈ ರೀತಿಯ ವರ್ತನೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿತು.

‘ಮುಸ್ಲಿಮ್‌ ಮಹಿಳೆಯರು ಹಿಬಾಜ್‌ ಧರಿಸುವುದು ಇಸ್ಲಾಮ್‌ನಲ್ಲಿ ಅಗತ್ಯ ಧಾರ್ಮಿಕ ಆಚರಣೆಯಲ್ಲ‘ ಎಂದು ಹೇಳಿದ್ದ ಕರ್ನಾಟಕ ಹೈಕೋರ್ಟ್‌, ಹಿಜಾಬ್‌ ನಿಷೇಧವನ್ನು ತೆರವು ಮಾಡಲು ನಿರಾಕರಿಸಿತ್ತು. ಇದರ ವಿರುದ್ಧ ಹಲವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ತಂಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು.

Leave a Reply

Your email address will not be published. Required fields are marked *

error: Content is protected !!