ವಿಟ್ಲ: ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:
ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಅವಳಿ ಪ್ರಶಸ್ತಿ
ವಿಟ್ಲ: ಕೊಳ್ನಾಡು ಗ್ರಾಮದ ಕಾಡುಮಠ ಸರಕಾರಿ ಪ್ರೌಢ ಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ನಡೆದಿದ್ದು, ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ತುಂಬೆ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಡೇಶಿವಾಲಯ ಮತ್ತು ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ದ್ವಿತೀಯ ಸ್ಥಾನ ಪಡೆದುಕೊಂಡವು.
ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ ಕಾಡುಮಠದ ಸಂಯುಕ್ತ ಆಶ್ರಯದಲ್ಲಿ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ಅಗರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಬಿಸಾ ಖಾದರ್ ವಹಿಸಿದ್ದರು. ವೇದಿಕೆಯಲ್ಲಿ
ಪುತ್ತೂರು ರಾಜ್ಯ ಬಿಜೆಪಿ ವಕ್ತಾರ ವಿಕಾಸ್, ಉದ್ಯಮಿ ಮಾಧವ ಮಾವೆ, ತಾಲೂಕು ಪಂಚಾಯಿತಿ ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜಾರಾಮ್ ಹಗ್ಡೆ, ಲೋಹಿತ್, ಅನಿತಾ ಶೆಟ್ಟಿಗಾರ್, ಶಶಿಕಲಾ, ಶ್ರೀಮತಿ ಸೌಮ್ಯಲತಾ, ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣು ಹೆಬ್ಬಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೋಹಿಣಿ ಬಿ, ಪ್ರಗತಿಪರ ಕೃಷಿಕರಾದ ಮನೋರಂಜನ್ ಕರೈ, ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ ಮೇರಾವು, ವಿಟ್ಲ ಲಯನ್ಸ್ ಅಧ್ಯಕ್ಷ ಸುಧೇಶ್ ಭಂಡಾರಿ ಎರ್ಮನಿಲೆ, ಬಾಲಕೃಷ್ಣ ಸೆರ್ಕಳ, ಬಿ ಎಸ್ ಎನ್ ಎಲ್ ನಿವೃತ್ತ ಇಂಜಿನಿಯರ್‌ಗೋಪಾಲ್ ಕುಲಾಲ್, ಉದ್ಯಮಿ ಶ್ರೀಕಾಂತ್ ಶೆಟ್ಟಿ ಅಗರಿ, ಜೋಯಲ್ ಲೋಬೋ, ಶಿವಪ್ರಸಾದ್ ಶೆಟ್ಟಿ,ಚಿನ್ನಪ್ಪ,ಉಮಾನಾಥ್ ರೈ, ಮಹಮ್ಮದ್ ಆರೀಫ್,ಶಶಿಕಾಂತ್, ಭಾಸ್ಕರ್ ರಾವ್ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ ಅಧ್ಯಕ್ಷವಿಠಲ ಶೆಟ್ಟಿ ಅಗರಿ ವಹಿಸಿ ಪ್ರಶಸ್ತಿಯನ್ನು ವಿತರಿಸಿದರು. ನಿವೃತ್ತ ಶಿಕ್ಷಕ ಬಾಬು ಮಾಸ್ಟರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ತಾರೇಶ್ ನಾಯ್ಕ್ ಕೆ ಎಲ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಇಬ್ರಾಹಿಂ ವಂದಿಸಿದರು. ಪರಮೇಶ್ವರ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.





