ಕೊಡಗು: ಹೆದ್ದಾರಿಯಲ್ಲಿ ಉರುಳಿ ಬಿದ್ದ ಲಾರಿ, ಚಾಲಕ ಸ್ಥಳದಲ್ಲಿಯೇ ಮೃತ್ಯು
ಕೊಡಗು: ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಉರುಳಿ ಬಿದ್ದಿದ್ದು, ಚಾಲಕ ನಾಗಭೂಷಣ್ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೋಳಿ ತುಂಬಿದ ಲಾರಿಯು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿಕೊಂಡಿದೆ.
ಚಾಲಕ ನಾಗಭೂಷಣ್ ಲಾರಿಯಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





