March 25, 2026

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಸಮಯದಲ್ಲಿ ಬದಲಾವಣೆ, ರಸ್ತೆ ಮಾರ್ಗದ ಬದಲು ಹೆಲಿಕಾಪ್ಟರ್ ಮೂಲಕ ಎನ್‌ಎಂಪಿಟಿಯ ಹೆಲಿಪ್ಯಾಡ್‌ಗೆ

0
image_editor_output_image-1769038434-1661847197637.jpg

ಮಂಗಳೂರು: ಪ್ರಧಾನಿ ಮೋದಿ ಅವರ ನಗರ ಭೇಟಿಯ ಸಮಯದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ಮೋದಿ ಅವರು ಸೆ.2ರಂದು ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಸೆ.2ರಂದು ಸಂಜೆ 4 ಗಂಟೆಗೆ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆಯೇ ನಡೆಯಲಿದೆ. ಮಧ್ಯಾಹ್ನ 1.30ರಿಂದ 2.30ರವರೆಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.ಮೋದಿ ಅವರು ಕೊಚ್ಚಿನ್‌ನಿಂದ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಎನ್‌ಎಂಪಿಟಿಯ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಅವರು ಎನ್‌ಎಂಪಿಟಿಯಿಂದ ರಸ್ತೆ ಮೂಲಕ ಗೋಲ್ಡ್ ಫಿಂಚ್ ಸಿಟಿ ಮೈದಾನವನ್ನು 1.30 ಕ್ಕೆ ತಲುಪುತ್ತಾರೆ ಮತ್ತು ಮೈದಾನದಿಂದ ಮಧ್ಯಾಹ್ನ 2.30 ಕ್ಕೆ ಹೊರಟು 3 ಗಂಟೆಗೆ ಹಿಂತಿರುಗುತ್ತಾರೆ. ಕಾರ್ಯಕ್ರಮದ ವೇದಿಕೆಯಿಂದಲೇ ಮೋದಿ ಅವರು 3000 ಕೋಟಿ ರೂಪಾಯಿಗಳ ವಿವಿಧ ಬಂದರು ಮತ್ತು ಇತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!