August 18, 2026

ವಿಟ್ಲ: ಮೋರಿಗೆ ಡಿಕ್ಕಿ ಹೊಡೆದ ಕೇರಳದ ಮಲಬಾರ್ ಬಸ್

0
IMG-20220830-WA0148

ವಿಟ್ಲ: ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತ ಘಟನೆ ಇಡ್ಕಿದು ಗ್ರಾಮದ ಉರಿಮಜಲು ಸಮೀಪ ಆ.೩೦ ರಂದು ನಡೆದಿದೆ.

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಬೆಳಗ್ಗೆ ಕಾಸರಗೋಡಿನಿಂದ ಪುತ್ತೂರಿಗೆ ಬಂದು ಮರಳಿ ಕಾಸರಗೋಡಿಗೆ ತೆರಳುತ್ತಿದ್ದಾಗ ಉರಿಮಜಲು ಸಮೀಪದ ನೇರರಸ್ತೆಯಲ್ಲಿ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಬದಿಗೆ ಚಲಿಸಿ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದಾಗಿ‌ ಬಸ್ಸಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಈ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!