ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದ ಕಾರು: 8 ಮಂದಿ ದಾರುಣ ಸಾವು
ಕಿಶ್ತ್‌ವಾರ್: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯಲ್ಲಿ ರಸ್ತೆಯಿಂದ ಸ್ಕಿಡ್ ಆದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಲಕಿ ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಕಿಶ್ತ್‌ವಾರ್ ಉಪ ಆಯುಕ್ತ (ಡಿಸಿ) ದೇವಾಂಶ್ ಯಾದವ್ ತಿಳಿಸಿದ್ದಾರೆ.
ಜಮ್ಮುವಿನ ಕಿಶ್ತ್‌ವಾರ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.




