August 12, 2026

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿಯ ಪ್ರತಿಷ್ಠಾಪನೆ ಮಾಡಿದ ಸಂಘಪರಿವಾರ

0
image_editor_output_image-845578379-1661925769701.jpg

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಸಂಘಪರಿವಾರದ ವತಿಯಿಂದ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದ್ದು, ಮಂಗಳವಾರ ತಡರಾತ್ರಿ ಹೈಕೋರ್ಟ್ ಗಣೇಶ ಪ್ರತಿಷ್ಠಾಪನೆಗೆ ಹಸಿರು ನಿಶಾನೆ ತೋರಿಸಿದ್ದರಿಂದ, ಬುಧವಾರ ಮಧ್ಯಾಹ್ನ 1:00 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಹೇಳಿದ್ದ ಸಂಘಪರಿವಾರ ಅಂಜುಮನ್ ಸಂಸ್ಥೆಯಿಂದ ಸುಪ್ರಿಂ ಕೋರ್ಟ್ ಮೊರೆ ಹೋಗಬಹುದು ಎನ್ನುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಗೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!