October 18, 2024

ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ ಪೊಲೀಸರು

0

ಹಾವೆರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದಿದೆ.

ಅಕ್ರಮವಾಗಿ ಹಣವನ್ನು ಸಾಗಾಣಿಕೆ ಮಾಡುತ್ತಿದ್ದ ಖದೀಮರು ಪೊಲೀಸರನ್ನು ಕಂಡು ಕಾರನ್ನು ಸ್ಪೀಡ್ ಆಗಿ ಓಡಿಸಿದ್ದಾರೆ. ಬಳಿಕ ಕಾರ್ ಹಿಂದೆ ಓಡಿ ಹೋಗಿ ಕೆಳಕ್ಕೆ ಬಿದ್ದರೂ ಅವರನ್ನು ಬಿಡದೇ ಪೊಲೀಸರು ಚೇಜ್ ಮಾಡಿ, ಕಾರನ್ನು ನಿಲ್ಲಿಸಿದ್ದಾರೆ.

ಆರೋಪಿಗಳಾದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ನಿಜ್ಜೂರು ಗ್ರಾಮದ ಫಯಾಜಖಾನ್(31), ಇಮ್ರಾನ್ ಖಾನ್(27) ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್(23) ಮತ್ತು ಸಯ್ಯದ ಅಮೀನ್(29)ನನ್ನು ಪೊಲೀರು ಬಂಧಿಸಿದ್ದಾರೆ. ಇವರು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಅಕ್ರಮವಾಗಿ ಹಣ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದೆ. 

Leave a Reply

Your email address will not be published. Required fields are marked *

error: Content is protected !!