ಮಾಜಿ ಡಿಸಿಎಂ ಲಕ್ಷಣ್ ಸವದಿ ಕಾರು ಅಪಘಾತ: ಅಪಾಯದಿಂದ ಪಾರು
ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಣ್ ಸವದಿ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಅಥಣಿಯಿಂದ ಬೆಳಗಾವಿ ಹೋಗುವಾಗ ಕಾರು ಅಪಘಾತ ಸಂಭವಿಸಿದ್ದು, ಲಕ್ಷ್ಮಣ್ ಸವದಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರು ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಿಂದ ಲಕ್ಷ್ಮಣ ಸವದಿ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಹೊರಕ್ಕೆ ಕರೆತರಲಾಗಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





