ನಾಲೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಸಾವು
ಹುಣಸೂರು: ನಾಲೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆ ತಲೆ ಸುತ್ತು ಬಂದು ನಾಲೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಣ್ಣ ನಾಯಕರ ಪತ್ನಿ ಜಯಮ್ಮ (61 ವ) ಎಂಬುವವರೇ ಮೃತಪಟ್ಟ ದುರ್ದೈವಿ.
ಗ್ರಾಮದ ಬಳಿ ತುಂಬು ಹರಿಯುತ್ತಿರುವ ಹಾರಂಗಿ ನಾಲೆಯ ಉಪಕಾಲುವೆಯಲ್ಲಿ ಗಣೇಶ ಹಬ್ಬದ ದಿನದಂದು ಬಟ್ಟೆ ಒಗೆಯಲು ಹೋಗಿದ್ದ ವೇಳೆ ಜಯಮ್ಮ ತಲೆಸುತ್ತಿನಿಂದ ನೀರಿಗೆ ಬಿದ್ದು ಅಲ್ಲೇ ಸಾವನ್ನಪ್ಪಿದ್ದಾರೆ. ಸಂಜೆ ವೇಳೆಗೆ ದಾರಿಹೋಕರು ನಾಲೆಯಲ್ಲಿ ಬಟ್ಟೆ ತೇಲುತ್ತಿದ್ದ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದ ಮೇರೆಗೆ ಮನೆಯವರು ಹೋಗಿ ನೋಡಿದ ವೇಳೆ ಜಯಮ್ಮನವರ ಶವ ತೇಲುತ್ತಿತ್ತು.





