ಬಾಲಕಿಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ: ಚಿತ್ರದುರ್ಗದ ಮುರುಘಾ ಶ್ರೀಯನ್ನು ಬಂಧಿಸಿದ ಪೊಲೀಸರು

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಹಾಸ್ಟೆಲ್ ಹೆಣ್ಣು ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಶ್ರೀಯನ್ನು ಪೊಲೀಸರು ಬಂಧಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.