April 11, 2025

ವೇಗವಾಗಿ ಬಂದ ಕಾರು ಪಾದಚಾರಿಗಳಿಗೆ ಢಿಕ್ಕಿ: ದೇವರ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ 6 ಮಂದಿ ಭಕ್ತರು ಸಾವು

0

ಅಹಮದಾಬಾದ್: ವೇಗವಾಗಿ ಬಂದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಅವಘಡದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಇವರೆಲ್ಲರು ಪಂಚಮಹಲ್ ನಿವಾಸಿಗಳಾಗಿದ್ದು, ಕಾಲ್ನಡಿಗೆಯಲ್ಲಿ ಅಂಬಾ ಜೀ ದರ್ಶನಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

 

 

ಅಪಘಾತದ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಮೊದಲು ಆಸ್ಪತ್ರೆಗೆ ಕಳುಹಿಸಿದ್ದು, ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ತೀವ್ರವಾಗಿ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!