April 12, 2025

ಮಂಗಳೂರಿನ ಸೋದರಿ, ಸೋದರರನ್ನು ಭೇಟಿಯಾಗಲು ಬರುತ್ತಿರುವೆ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ

0

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಂದ ಮಂಗಳೂರಿಗೆ ಆಗಮಿಸುತ್ತಿದ್ದು, ಈ ಸಂತಸದ ಸುದ್ದಿಯನ್ನು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದಿದ್ದಾರೆ.

ಕರ್ನಾಟಕದ ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದಿಂದ ನಾನಾ ಹೊಸ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಇಂದು ನೆರವೇರಿಸಲಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!