ಭಾರೀ ಮಳೆ, ನೆರೆ: ಪುದುಚೇರಿಯಲ್ಲಿ ಶಾಲೆ–ಕಾಲೇಜುಗಳಿಗೆ ರಜೆ
ಚೆನ್ನೈ: ತಮಿಳುನಾಡಿನಲ್ಲಿ ಸೋಮವಾರವೂ ಭಾರಿ ಮಳೆ ಮುಂದುವರಿದಿದ್ದು, ಚೆನ್ನೈಯ ಹಲವೆಡೆ ನೆರೆ ಉಂಟಾಗಿದೆ.
ನಗರದ ಹಲವೆಡೆ ರಸ್ತೆ ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಚಾರಕ್ಕೂ ತೊಡಕಾಗಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊರತ್ತೂರು ಪ್ರದೇಶ ಬಹುತೇಕ ಜಲಾವೃತಗೊಂಡಿದೆ. ನವೆಂಬರ್ 9ರಿಂದ 11ರ ವರೆಗೆ ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಯಮತ್ತೂರಿನಲ್ಲಿ ಇಂದು (ಸೋಮವಾರ) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿಕೂಲ ಪರಿಸ್ಥಿತಿಯ ಕಾರಣ ಪುದುಚೇರಿ ಮತ್ತು ಕರೈಕಲ್‌ಗಳಲ್ಲಿ ಶಾಲೆ–ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.