August 12, 2026

ಬಾಲಕಿಯ ಅತ್ಯಾಚಾರ: ಆರೋಪಿಯ ಬಂಧನ

0
image_editor_output_image976214390-1662108427414.jpg

ಬೆಳಗಾವಿ: ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು, ಮಗು ಹೆರಲು ಕಾರಣವಾದ ಯುವಕನನ್ನು ಖಾನಾಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಖಾನಾಪುರ ತಾಲ್ಲೂಕಿನ ಗೌಳಿವಾಡ ಗ್ರಾಮದ ಮಲ್ಲು ಅಪ್ಪು ಪಿಂಗಳೆ (19) ಬಂಧಿತ. ಇದೇ ತಾಲ್ಲೂಕಿನ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ, ಕೆಲ ವರ್ಷಗಳಿಂದ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

ಪರಿಣಾಮ ಬಾಲಕಿ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿ ಮೇಲೆ ‘ಪೋಕ್ಸೊ’ ಅಡಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!