April 12, 2025

ಮಂಗಳೂರು: 3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

0

ಮಂಗಳೂರು: 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸವನ್ನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ರಿಮೋಟ್ ಬಟನ್ ಒತ್ತಿ ನೆರವೇರಿಸಿದ್ದಾರೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್ VI ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ. 677 ಕೋಟಿ) ಗಳು ಸೇರಿವೆ.

ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ. 100 ಕೋಟಿ), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ. 100 ಕೋಟಿ) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!