ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ವಿಚಾರಣಾಧೀನ ಕೈದಿ ಸಂಖ್ಯೆ “2261”

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ.
ಅವರನ್ನು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸರು ಬಂಧಿಸಿದ್ದರು. ಪ್ರಾಥಮಿಕ ವಿಚಾರಣೆ, ವೈದ್ಯಕೀಯ ತಪಾಸಣೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿದ ಶರಣರನ್ನು ಶುಕ್ರವಾರ ನಸುಕಿನ 3 ಗಂಟೆಗೆ ಕಾರಾಗೃಹಕ್ಕೆ ಸೇರಿಸಲಾಗಿತ್ತು.
ಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ಬೆಳಿಗ್ಗೆ 9.30ಕ್ಕೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಇದಕ್ಕೆ ನ್ಯಾಯಾಲಯ ಅನುಮತಿ ನೀಡಲಿಲ್ಲ.