August 12, 2026

ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image-1628884379-1662183506019.jpg

ಕಟಕ್: ಒಡಿಶಾದ ಕಟಕ್ ನ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ಅಧಿಕೃತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

49 ವರ್ಷದ ಸುಭಾಷ್ ಕುಮಾರ್ ಬಿಹಾರಿ ಅವರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಎರಡು ದಿನಗಳಿಂದ ರಜೆಯಲ್ಲಿದ್ದ ಅವರು ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕಿತ್ತು.

ನ್ಯಾಯಾಧೀಶರ ಮೃತದೇಹ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳಿವೆ ಎಂದು ಸಹಾಯಕ ಪೊಲೀಸ್ ಕಮಿಷನರ್ ತಪಸ್ ಪ್ರಧಾನ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!