March 25, 2026

ಬಸ್ಸಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಟ್ರಕ್: ನಾಲ್ವರು ಕಾರ್ಮಿಕರು ಸಾವು, 24 ಮಂದಿ ಗಾಯ

0
image_editor_output_image-1157784047-1662183710920.jpg

ಲಕ್ನೋ : ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸಿಗೆ ಟ್ರಕ್ ವೊಂದು ಹಿಂದಿನಿಂದ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಇಪ್ಪತ್ತನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಾರಾಬಂಕಿ ಪ್ರದೇಶದಲ್ಲಿ ಸಂಭವಿಸಿದೆ.

ಅರವತ್ತು ಜನ ನೇಪಾಳದ ವಲಸೆ ಕಾರ್ಮಿಕರನ್ನು ಗೋವಾ ಕಡೆಗೆ ಬಸ್ಸಿನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಬಸ್ಸಿನ ಟಯರ್ ಪಂಚರ್ ಅದ ಪರಿಣಾಮ ಚಾಲಕ ಚಕ್ರ ಬದಲಿಸಲು ರಸ್ತೆ ಬದಿ ಬಸ್ಸನ್ನು ನಿಲ್ಲಿಸಿದ್ದ ಈ ವೇಳೆ ಅತಿವೇಗದಿಂದ ಬಂದ ಟ್ರಕ್ ವೊಂದು ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ಬಸ್ಸಿನಲ್ಲಿದ್ದ ೬೦ ಮಂದಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಅಲ್ಲದೆ ಸುಮಾರು ಇಪ್ಪತ್ತನಾಲ್ಕು ಮಂದಿ ಗಾಯಗೊಂಡಿದ್ದು ಅವರನ್ನು ಬಾರಾಬಂಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲದೆ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಲಕ್ನೋ ದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!