ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಆವಾಜ್ ಹಾಕಿ ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಆವಾಜ್ ಹಾಕಿ ಶಾಸಕ ಅರವಿಂದ ಲಿಂಬಾವಳಿ ದರ್ಪ ಮೇರೆದಿರುವ ಘಟನೆ ನಡೆದಿದೆ.
ಶಾಸಕರು ಗುರುವಾರ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಲು ತೆರಳಿದ ಮೇಳೆ ಘಟನೆ ನಡೆದಿದೆ. ಅಧಿಕಾರಿಗಳ ಜೊತೆ ಮಳೆ ಹಾನಿ ಪ್ರದೇಶ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ್ ಲಿಂಬಾವಳಿಯಿಂದ ಅಮಾಯಕ ಮಹಿಳೆ ಮೇಲೆ ದರ್ಪ ಮೇರೆದಿದ್ದಾರೆ.
ಮಳೆ ಅನಾಹುತ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಿಸಲು ಅಧಿಕಾರಿಗಳ ಜೊತೆ ಅರವಿಂದ ಲಿಂಬಾವಳಿ ಬಂದಿದ್ದರು. ಈ ವೇಳೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಅವಾಜ್ ಹಾಕಿದ್ದಾರೆ. ನಂತರ ಮಹಿಳೆಯನ್ನು ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಕಿಡಿಕಾರಿದ್ದಾರೆ.
ಇದೀಗ ಶಾಸಕ ಅರವಿಂದ ಲಿಂಬಾವಳಿಯಿಂದ ನಿಂದನೆಗೆ ಒಳಗಾಗಿದ್ದ ಮಹಿಳೆಯ ಮೇಲೆ ಬಿಬಿಎಂಪಿ ಎಂಜಿನಿಯರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ವಿಚಾರಕ್ಕೆ ಕ್ರಮ ಕೈಗೊಳ್ಳಲು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಆರೋಪಿಸಲಾಗಿದೆ.