March 25, 2026

ಪುತ್ತೂರು: ಬಸ್ ಮತ್ತು ಬೈಕ್ ಅಪಘಾತ: ಬೈಕ್ ಸವಾರ ಮೃತ್ಯು

0
image_editor_output_image254039699-1662270188144

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸೆ.3 ರಂದು ರಾತ್ರಿ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ವೀರಮಂಗಿಲ ಖಂಡಿಗ ನಿವಾಸಿ ಚಂದ್ರಶೇಖರ್ ರವರ ಪುತ್ರ ಭರತ್ ರಾಜ್ ಗೌಡ (23) ಎಂದು ಗುರುತಿಸಲಾಗಿದೆ.

ಮೃತ ಭರತ್
ಡ್ಯೂಕ್ ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಭರತ್ ರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬೈಕ್ ನಲ್ಲಿದ್ದ ಸಹಸವಾರ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ರವರ ಪುತ್ರ ಧನುಷ್(24) ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!