ಹೋಟೆಲ್ ನಲ್ಲಿ ಬೆಂಕಿ ಅವಘಡ: ಇಬ್ಬರು ಸಾವು, 10 ಮಂದಿ ಗಾಯ
ಲಕ್ನೋ : ನಗರದ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು ಹತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಜ್ರತ್ ಗಂಜ್ ಪ್ರದೇಶದಲ್ಲಿ ಸೋಮವಾರ ಸಂಭವಿಸಿದೆ.
ಹೋಟೆಲ್ ನ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸ್ಥಳಕ್ಕೆ ಮೂರು ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ದಳದ ದೌಡಾಯಿಸಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಹೇಳಿದ್ದಾರೆ.





