August 12, 2026

ಕೊಣಾಜೆ: ಮದುವೆಯಾದ 15 ದಿನದಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

0
image_editor_output_image-1310748076-1662379461871.jpg

ಕೊಣಾಜೆ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ನಡೆದಿದೆ.


ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಎಂಬಾಕೆಯೇ ಆತ್ಮಹತ್ಯೆಗೈದ ಯುವತಿಯಾಗಿದ್ದಾಳೆ.

ಗಂಜಿಮಠ ಮೂಲದ ಹಾಗೂ ದುಬಾಯಿಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬಾತನ ಜೊತೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥ ನಡೆದಿದ್ದು, ಕಳೆದ ಆಗಸ್ಡ್ 21 ರಂದು ವಿವಾಹ ನೆರವೇರಿತ್ತು.

ಸೆ.3 ರಂದು ರಶ್ಮಿಯ ಅಕ್ಕನ ಮನೆಯಲ್ಲಿ ಔತನ ಕೂಟ ಏರ್ಪಡಿಸಲಾಗಿದ್ದು, ಅದೇ ದಿನ ರಶ್ಮಿ ಇಲಿಪಾಷಣ ಸೇವಿಸಿದ್ದಳು ಎನ್ನಲಾಗಿದೆ. ಬಳಿಕ ಆಕೆಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಕೆ ಮೃತಪಟ್ಟಿದ್ದಾಳೆ.ಈ ಬಗ್ಗೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!