ಕರಾವಳಿ ಭಾಗದಲ್ಲಿ ಮಳೆಯಾಗುವ ಸೂಚನೆ: ಸೆ. 5ರಿಂದ 8 ರ ವರೆಗೆ “ಎಲ್ಲೋ ಅಲರ್ಟ್’ ಘೋಷಣೆ
ಮಂಗಳೂ: ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಸೆ. 5ರಿಂದ 8 ರ ವರೆಗೆ ಕರಾವಳಿಯಲ್ಲಿ “ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ರವಿವಾರ ಮಳೆಯ ತೀವ್ರತೆ ಕಡಿಮೆ ಇತ್ತು. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆ ಸಾಧಾರಣ ಮಳೆಯಾಗಿದೆ.






