August 12, 2026

ಎನ್‌ಸಿಪಿ ನಾಯಕ ನವಾಬ್ ಮಲಿಕ್ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲು

0
image_editor_output_image-248170885-1636349276712.jpg

ದಿಲ್ಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ನವಾಬ್ ಮಲಿಕ್ ವಿರುದ್ಧ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಅವರ ತಂದೆ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಗ ಹಾಗೂ ತಮ್ಮ ಕುಟುಂಬದ ವಿರುದ್ಧ ಪತ್ರಿಕಾಗೋಷ್ಠಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂಬ ಆರೋಪದ ಮೇರೆಗೆ ಧ್ಯಾನದೇವ್ ಕಚ್ರುಜಿ ವಾಂಖೆಡೆ ಅವರು ₹ 1.25 ಕೋಟಿ ಮಾನನಷ್ಟ ಪರಿಹಾರ ಕೋರಿದ್ದಾರೆ.

‘ವಾಂಖೆಡೆ ಮುಸ್ಲಿಂ, ಅವರು ಹಿಂದೂಗಳಲ್ಲ’ ಎಂಬ ಮಲಿಕ್‌ ಹೇಳಿಕೆಗಳು ಕುಟುಂಬದ ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸುವಂತಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಮಲಿಕ್ ಅವರ ಹೇಳಿಕೆಗಳು ವಾಂಖೆಡೆ ಮತ್ತು ಅವರ ಕುಟುಂಬದ ಹೆಸರು, ಗುಣ, ಖ್ಯಾತಿ ಮತ್ತು ಸಾಮಾಜಿಕ ವ್ಯಕ್ತಿತ್ವಕ್ಕೆ ಸರಿಪಡಿಸಲಾಗದ ನಷ್ಟ, ಹಾನಿ, ತೊಂದರೆ, ತಾರತಮ್ಯ ಉಂಟುಮಾಡಿವೆ ಎಂದು ದೂರಲಾಗಿದೆ.

ವಕೀಲರಾದ ದಿವಾಕರ್ ರೈ ಮತ್ತು ಸೌರಭ್ ತಮ್ಹನ್‌ಕರ್ ಅವರ ಮೂಲಕ ಸಲ್ಲಿಸಲಾದ ಮೊಕದ್ದಮೆ ಅರ್ಜಿಯಲ್ಲಿ ಈ ಕೆಳಗಿನ ಮನವಿ ಸಲ್ಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!