February 2, 2026

IPL ಸಹಿತ ಎಲ್ಲ ಮಾದರಿಯ ಕ್ರಿಕೆಟ್‌ಗೆ ಸುರೇಶ್ ರೈನಾ ವಿದಾಯ

0
image_editor_output_image1630794186-1662451299539.jpg

ದಿಲ್ಲಿ: ಭಾರತ ಕ್ರಿಕೆಟಿಗ ಸುರೇಶ್‌ ರೈನಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸುತ್ತಿರುವುದಾಗಿ ಮಂಗಳವಾರ ಪ್ರಕಟಿಸಿದ್ದಾರೆ.

ಈ ಸಂಬಂಧ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸುರೇಶ್‌ ರೈನಾ, ‘ನನ್ನ ದೇಶ ಮತ್ತು ರಾಜ್ಯವನ್ನು ಪ್ರತಿನಿಧಿಸುವುದು ನಿಜವಾಗಿಯೂ ಗೌರವದ ಸಂಗತಿ. ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ), ಉತ್ತರ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌, ಚೆನ್ನೈ ಸೂಪರ್‌ ಕಿಂಗ್ಸ್‌, ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಸರ್‌ ಹಾಗೂ ಬೆಂಬಲಿಸಿದ ಮತ್ತು ನನ್ನ ಸಾಮರ್ಥ್ಯದಲ್ಲಿ ದೃಢವಾದ ನಂಬಿಕೆ ಇರಿಸಿದ್ದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!