ಮಿತ್ತೂರಿನ ಫ್ರೀಡಮ್ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಎನ್‌ಐಎ ದಾಳಿ ಮುಂದುವರೆದಿದೆ.
ಅದರ ಮುಂದುವರಿದ ಭಾಗವಾಗಿ ಇಂದು ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಮ್ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಶಿಹಾಬುದ್ಧೀನ್ಗೆ ಇದೇ ಸೆಂಟರ್‌ನಲ್ಲಿ ತರಬೇತಿ ನೀಡಲಾಗಿತ್ತು ಎಂಬ ಆರೋಪದ ಹಿನ್ನೆಲೆ ಇಲ್ಲಿಗೆ ದಾಳಿ ನಡೆಸಿದ್ದಾರೆ.
ಸದ್ಯ ಈ ಸ್ಥಳದಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ನಲ್ಲಿ ಏರ್ಪಡಿಸಲಾಗಿದೆ. ಕಾಡಿನಂತಿರುವ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ತರಬೇತಿ ಸೆಂಟರ್ ನ ಚಲನವಲನಗಳ ಬಗ್ಗೆ ಈ ಹಿಂದೆಯೂ ಸ್ಥಳೀಯ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದರು.




