February 2, 2026

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ‘ಪದ್ಮಶ್ರೀ’ ಪ್ರದಾನ

0
image_editor_output_image-799690245-1636351795637.jpg

ಹೊಸದಿಲ್ಲಿ: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.

ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!