February 3, 2026

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

0
Screenshot_20220906-223537_Chrome.jpg

ಬೆಂಗಳೂರು: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ನಿಧನರಾಗಿರೋದಾಗಿ ತಿಳಿದು ಬಂದಿದೆ.

ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತವಾಗಿದ್ದು, ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು, ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ನಾಲ್ಕೈದು ಬಾರಿ ಹೃದಯ ತಪಾಸಣೆ ನಡೆಸಿದರೂ ಯಾವುದೇ ಫಲ ನೀಡಿಲ್ಲ ಎಂದು ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!