February 3, 2026

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ವಿವಿಧೆಡೆ ಎನ್ ಐ ಎ ದಾಳಿ ಪ್ರಕರಣ: ಮದ್ದುಗುಂಡುಗಳು, ಸುಧಾರಿತ ಶಸ್ತ್ರಾಸ್ತ್ರಗಳು ಪತ್ತೆ!

0
image_editor_output_image1988336035-1662521887653

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪುತ್ತೂರು, ಸುಳ್ಯ ಸೇರಿದಂತೆ 33 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.

ದಿಢೀರ್‌ ಆಗಿ ನಡೆದ ದಾಳಿ ಇದಾಗಿದೆ. ಪ್ರವೀಣ್‌ ಹತ್ಯಾ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಸಕ್ರಿಯ ಸದಸ್ಯರಾಗಿರುವ ಆರೋಪಿಗಳು ಸಮಾಜದ ಒಂದು ವರ್ಗದ ಸದಸ್ಯರಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುವ ದೊಡ್ಡ ಪಿತೂರಿಯ ಭಾಗವಾಗಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಯೋಜಿಸಿದ್ದಾರೆ ಮತ್ತು ಮಾಡಿದ್ದಾರೆ ಎಂದು ಎನ್ ಐ ಎ ತನಿಖೆ ಬಳಿಕ ತಿಳಿಸಿದೆ‌.

ಆರೋಪಿಗಳು ಮತ್ತು ಶಂಕಿತರ ಆವರಣದಲ್ಲಿ ಸೆ.6 ರಂದು ನಡೆಸಿದ ಶೋಧಗಳಲ್ಲಿ, ಡಿಜಿಟಲ್ ಸಾಧನಗಳು, ಬಳಸಿದ ಮದ್ದುಗುಂಡುಗಳು, ಸುಧಾರಿತ ಶಸ್ತ್ರಾಸ್ತ್ರಗಳು, ನಗದು, ದೋಷಾರೋಪಣೆ ದಾಖಲೆಗಳು, ಕರಪತ್ರಗಳು ಮತ್ತು ಸಾಹಿತ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!