ಸುಳ್ಯ: ಮನೆಗೆ ಆಕಸ್ಮಿಕವಾಗಿ ಬೆಂಕಿ, ವ್ಯಕ್ತಿ ಸಜೀವ ದಹನ
ಸುಳ್ಯ: ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿಯೋರ್ವರು ಸಜೀವ ದಹನಗೊಂಡ ಘಟನೆ ಸುಳ್ಯ ತಾಲೂಕಿನ ಐವರ್ನಾಡಿನ ಪರ್ಲಿಕಜೆ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಐವರ್ನಾಡಿನ ಪರ್ಲಿಕಜೆ ಸುಧಾಕರ್ (47) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಸುಧಾಕರ್ ಮನೆಯಲ್ಲಿದ್ದು, ಅವರ ಪತ್ನಿ ಎಂದಿನಂತೆ ರಬ್ಬರ್ ಟ್ಯಾಪಿಂಗ್‌ಗೆಂದು ತೆರಳಿದ್ದರೆನ್ನಲಾಗಿದೆ. ಮನೆಯಲ್ಲಿ ಬೇರೆ ಯಾರೂ ಇಲ್ಲದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಮನೆಯ ಒಂದು ಪಾರ್ಶ್ವ ಬೆಂಕಿಗಾಹುತಿಯಾಗಿದೆ.





