February 2, 2026

ಉಡುಪಿ: ಬಾಲಕಿಯ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ, ಆರೋಪಿಗೆ ಜೀವಿತಾವಾಧಿ ಶಿಕ್ಷೆ ಪ್ರಕಟ

0
image_editor_output_image-1411471775-1662614893022.jpg

ಉಡುಪಿ: ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಆರೋಪಿ ಬಾಗಲಕೋಟೆ ಜಿಲ್ಲಾ ಬಾದಾಮಿ ತಾಲೂಕಿನ ಹನುಮಂತ ಬಸಪ್ಪ ಕಂಬಳಿ (42)ಗೆ ಜೀವಿತಾವಾಧಿ ಕಾರಾಗೃಹ ಶಿಕ್ಷೆ ಸಹಿತ ಇತರೆ ಪ್ರಕರಣಗಳಿಗೂ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದರಿಂದ ನ್ಯಾಯಾಧೀಶ ಶ್ರಿನಿವಾಸ ಸುವರ್ಣ, ಆರೋಪಿಯನ್ನು ದೋಷಿ ಎಂಬುದಾಗಿ ಸೆ.5ರಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ.6ರಂದು ಪ್ರಕಟಿದರು.

ಆರೋಪಿಗೆ ಐಪಿಸಿ ಕಲಂ 302(ಕೊಲೆ) ಅಡಿಯಲ್ಲಿ ಜೀವಿತಾವಧಿ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ, ಪೋಕ್ಸೋ ಕಾಯ್ದೆಯಡಿ ಬರುವ ಅಪ್ರಾಪ್ತಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ, ಅಪ್ರಾಪ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ 10 ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ, ಸಾಕ್ಷ್ಯನಾಶದಡಿ 7 ವರ್ಷ ಜೈಲು ಹಾಗೂ 2 ಸಾವಿರ ರೂ. ದಂಡ ವಿಧಿಸಿದ್ದು ದಂಡ ಪಾವತಿ ಮಾಡಲು ತಪ್ಪಿದಲ್ಲಿ ಒಂದು ವರ್ಷ ಕಠಿನ ಸಜೆ ವಿಧಿಸಿ ಆದೇಶಿಸಿದ್ದಾರೆ.

ದಂಡದ 32 ಸಾವಿರ ರೂ. ಮೊತ್ತದಲ್ಲಿ 7 ಸಾವಿರ ರೂ. ಸರಕಾರಕ್ಕೆ, 25 ಸಾವಿರ ರೂ. ಮೊತ್ತ ಮೃತ ಬಾಲಕಿ ಕುಟುಂಬಕ್ಕೆ ಹಾಗೂ ಸರಕಾರ‌ದಿಂದ ಬಾಲಕಿ ಪೋಷಕರಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯದ ತೀರ್ಪಿನಲ್ಲಿ ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!