February 2, 2026

ನರಿಕೊಂಬು: ವಿಷ ಪದಾರ್ಥ ಸೇವಿಸಿದ ತಾಯಿ, ಮಗ ಆತ್ಮಹತ್ಯೆಗೆ ಯತ್ನ, ತಾಯಿ ಸಾವು, ಮಗನ ಸ್ಥಿತಿ ಚಿಂತಾಜನಕ

0
image_editor_output_image-117522370-1662616043182.jpg

ನರಿಕೊಂಬು: ವಿಷ ಪದಾರ್ಥ ಸೇವಿಸಿದ ತಾಯಿ, ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ.

ಗಿರಿಜಾ (62) ಮೃತ ತಾಯಿ, ಪುತ್ರ ರಾಮಚಂದ್ರ (40) ಸ್ಥಿತಿ ಚಿಂತಾಜನಕವಾಗಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಗಿರಿಜಾ ಅವರಿಗೆ ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಇದ್ದಾರೆ. ಅವರ ಪತಿ ನಿಧನ ಹೊಂದಿದ್ದಾರೆ.

ಮೂವರು ಗಂಡು ಮಕ್ಕಳು ವಿವಿಧ ರೀತಿಯ ಅಂಗವೈಕಲ್ಯ ಹೊಂದಿದ್ದಾರೆ. ಈ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರಬಹುದು ಎಂದು ಶಂಕಿಸಲಾಗಿದೆ.

ಇವರು ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದರು. ಬಾತ್ ರೂಂನಲ್ಲಿ ತಾಯಿ ಮತ್ತು ಮಗ ಕುಸಿದು ಬಿದ್ದಿರುವುದನ್ನು ಕಂಡ ಸಂಬಂಧಿ ಉಮಾನಾಥ ಎಂಬವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!