February 3, 2026

ಕಾರ್ಕಳ: ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0
image_editor_output_image1635852610-1662617119394.jpg

ಕಾರ್ಕಳ: ತಲೆನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ನಿಟ್ಟೆ ಗ್ರಾಮದ ಪರ್ಪಲೆಯಲ್ಲಿ ನಡೆದಿದೆ.

ಪರ್ಪಲೆಯ ಲೂಯಿಸ್ ಡಿಸೋಜ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡವರು. ಎರಡ್ಮೂರು ದಿನಗಳಿಂದ ತಲೆನೋವಿನಿಂದ ಬಳಲುತ್ತಿದ್ದ ಅವರು ಸೆಪ್ಟಂಬರ್‍ 6ರಂದು ಮನೆಯ ಹಿಂಬದಿ ಹಾಡಿಯಲ್ಲಿದ್ದ ಗೇರು ಮರದ ಗೆಲ್ಲಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರೆನಿಟಾ ಕಳೆದ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ಎಂಬವರೊಂದಿಗೆ ಮದುವೆಯಾಗಿದ್ದು, ಮದುವೆಯಾದ ಆರು ವರ್ಷದಲ್ಲೇ ವಿಚ್ಚೇದನವಾಗಿತ್ತು.

ಬಳಿಕ ಹೆತ್ತವರೊಂದಿಗೆ ವಾಸಿಸುತ್ತಿದ್ದರು. ಮೃತರು ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!