June 14, 2024

ಬಂಟ್ವಾಳ: ತಂದೆಯಿಂದಲೇ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ತಂದೆಗೆ 15 ವರ್ಷಗಳ ಕಠಿಣ ಸೆರೆವಾಸ ಹಾಗೂ 25000 ದಂಡ: ತೀರ್ಪು ಪ್ರಕಟಿಸಿದ ನ್ಯಾಯಾಲಯ

0

ಬಂಟ್ವಾಳ: ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮಹಮ್ಮದ್ ಅವರ ಪುತ್ರ ದಾವೋದ್ (55) ಆರೋಪಿ ಯಾಗಿದ್ದು , ಈತನಿಗೆ 15 ವರ್ಷಗಳ ಕಠಿಣ ಕಾರಾವಾಸ ಹಾಗೂ 25000 ಜುಲ್ಮಾನೆ ಶಿಕ್ಷೆಯ ತೀರ್ಪು ಪ್ರಕಟಿಸಿದೆ.

2018 ರ ಜನವರಿ ತಿಂಗಳಿನಲ್ಲಿ ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಲಾಡ್ಜ್ ಮತ್ತು ಇರಾ ಗ್ರಾಮದಲ್ಲಿ ತಂದೆಯಿಂದಲೇ ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿ ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಶರಣಗೌಡ ಹಾಗೂ ಟಿ. ಡಿ. ನಾಗರಾಜ್ ರವರು ತನಿಖೆ ನಡೆಸಿ ಆರೋಪಿಯಾದ ದಾವೂದ್, ನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣವು ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರಪಥ -2) ನ್ಯಾಯಾಲಯದಲ್ಲಿ ವಿಚಾರಣೆಗೊಂಡು ನ್ಯಾಯಾಧೀಶರಾದ ಕೆ. ಎಮ್. ರಾಧಾಕೃಷ್ಣ ರವರು ಅರೋಪಿತನಿಗೆ 15 ವರ್ಷಗಳ ಕಠಿಣ ಕಾರಾವಾಸ ಹಾಗೂ ರೂ. 25000/- ಜುಲ್ಮಾನೆ ಶಿಕ್ಷೆ ಯ ತೀರ್ಪು ಅದೇಶಿಸಿರುತ್ತಾರೆ.

ಪ್ರಕರಣದ ಕೂಲಂಕುಷ ತನಿಖೆಯನ್ನು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಅಧೀಕ್ಷಕರ ಮಾರ್ಗದರ್ಶನದಂತೆ ಪೊಲೀಸ್ ವೃತ್ತ ನಿರೀಕ್ಷಕರಾದ ಶರಣಗೌಡ ಮತ್ತು ಟಿ. ಡಿ. ನಾಗರಾಜ್ ರವರು ನಡೆಸಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾದ ವೆಂಕಟರಮಣ ಸ್ವಾಮಿ ರವರು ಸಮರ್ಥವಾಗಿ ವಾದ ಮಂಡಿಸಿದ್ದರು.
ಬಂಟ್ವಾಳ ಗ್ರಾಮಾಂತರ ಠಾಣಾ ಕೋರ್ಟ್ ಮಾನಿಟರಿಂಗ್ ಸೆಲ್ ನ
ಪಿ.ಎಸ್.ಐ ಹರೀಶ್ ಮತ್ತು ಸಿಬ್ಬಂದಿಗಳು ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸೂಕ್ತ ಸಮಯಕ್ಕೆ ಹಾಜರುಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!