May 2, 2026

ನಿರ್ಮಾಣ ಹಂತದಲ್ಲಿರುವ ನಾಲ್ಕಂತಸ್ತಿನ ಕಟ್ಟಡ ಕುಸಿತ: ಮೂವರು ಸಾವು

0
image_editor_output_image-1613150100-1662700122482.jpg

ನವದೆಹಲಿ: ನಿರ್ಮಾಣ ಹಂತದಲ್ಲಿರುವ ನಾಲ್ಕಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಳಗ್ಗೆ ಸುಮಾರು 8.50ರ ಹೊತ್ತಿಗೆ ಕಟ್ಟಡ ಕುಸಿದು ಬಿದ್ದಿದೆ. ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!