ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆ ಬಹುತೇಕ ಖಚಿತವಾಗಿದೆ.
ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆ ಮಧ್ಯಾಹ್ನ. ನಡೆಯಲಿದೆ. ಇದಕ್ಕೂ ಮೊದಲು ಪಕ್ಷದ ಮುಖಂಡರು ನಡೆಸಿದ ಸಭೆಯಲ್ಲಿ ಈ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಉಪ ಮೇಯರ್ ಪೂರ್ಣಿಮ
ಮೇಯರ್ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಹೊಂದಿದೆ.
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಖಚಿತವಾಗಿರುವುದರಿಂದ ಜಯಾನಂದ ಮತ್ತು ಪೂರ್ಣಿಮಾ ಆಯ್ಕೆಯಾಗಲಿದ್ದಾರೆ.




