May 3, 2026

ನನ್ನ ಮತ್ತು ನನ್ನ ಪತ್ನಿಯ ಮೊಬೈಲ್‌ನ್ನು NIA ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ: ರಿಯಾಝ್ ಫರಂಗಿಪೇಟೆ

0
image_editor_output_image808945989-1662701745335.jpg

ಬಂಟ್ವಾಳ: ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ತನಿಖಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ. ಎನ್ಐಎ ತನಿಖೆ ಪಾರದರ್ಶಕವಾಗಿರಲಿ ಎಂದು ಎಸ್‌ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ.

ರಿಯಾಝ್ ಫರಂಗಿಪೇಟೆ ನಿವಾಸಕ್ಕೆ ಎನ್ಐಎ ದಾಳಿ ನಡೆಸಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಬಿಹಾರ ಪ್ರಕರಣವೊಂದರ ವಿಚಾರದಲ್ಲಿ ತನಿಖೆ ಮಾಡಿದ ವೇಳೆ ನನ್ನ ಮತ್ತು ನನ್ನ ಪತ್ನಿಯ ಮೊಬೈಲ್‌ನ್ನು ಎನ್ಐ ಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.

ಜುಲೈ ಪ್ರಕರಣ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಹಲವು ಪ್ರಶ್ನೆ ಕೇಳಿದ್ದಾರೆ. ಹಲವು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಎನ್ಐಎ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆ ಕೇಳಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಗಡಿಬಿಡಿ ಮಾಡುವ ಊಹಾಪೋಹದಿಂದ ಬಿಹಾರದಲ್ಲಿ ಪಕ್ಷದ ಐದು ಮಂದಿಯನ್ನು ಬಂಧನ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಪೂರಕ ಪರಿಶೀಲನೆ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ನಾನು ಬಿಹಾರದಲ್ಲಿ ಎಸ್‌ಡಿಪಿಐ ಪಕ್ಷದ ಉಸ್ತುವಾರಿ ವಹಿಸಿಕೊಂಡಿದ್ದೇನೆ. ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಲ್ಲಿರುವುದರಿಂದ ಬಿಹಾರ ರಾಜ್ಯ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿದ್ದೆ ಎಂದು ಅವರು ಸ್ಪಷ್ಟಪಡಿಸಿದರು. ಎಲ್ಲಾ ತನಿಖೆಗೆ ತಾನು ಹಾಗೂ ಪಕ್ಷ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

ಎನ್.ಐ.ಎ ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರ ಪ್ರೇರಿತವಾಗಿ ಈ ಕಾರ್ಯ ಮಾಡಲಾಗಿತ್ತು ಎಂದು ಅವರು ಇದೇ ವೇಳೆ ಆಪಾದಿಸಿದರು.

Leave a Reply

Your email address will not be published. Required fields are marked *

error: Content is protected !!