ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ: ಯುವಕನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದು ಕೊಲೆ
ಗದಗ: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವೇಳೆ ಓರ್ವನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ತೋಂಟದಾರ್ಯ ಮಠದ ಬಳಿ ನಡೆದಿದೆ.
ಚಾಕು ಇರಿತಕ್ಕೆ ಒಳಗಾದ 27 ವರ್ಷದ ಸುದೀಪ್ ಮುಂಡೆವಾಡಿ ಎಂಬ ಯುವಕ ತೀವ್ರ ರಕ್ತಸ್ರಾವದಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್‍ನ ಸ್ನೇಹಿತರಾಗಿದ್ದ ಆದಿತ್ಯ ಮುತಗಾರ ಹಾಗೂ ಐದಾರು ಜನರ ಸ್ನೇಹಿತರು ಸೇರಿ ಹಲ್ಲೆಮಾಡಿ ಕೊಲೆ ಮಾಡಿದ್ದಾರೆ.
ನಾಲ್ಕು ಜನ ಕೈಕಾಲು ಹಿಡಿದುಕೊಂಡು ಹೊಟ್ಟೆ ಭಾಗ ಹಾಗೂ ಮರ್ಮಾಂಗಕ್ಕೆ ಓರ್ವ ಮನಬಂದಂತೆ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಸಂದೀಪ್ ಮೃತಪಟ್ಟಿದ್ದಾನೆ. ಪೊಲೀಸ್ ಮಾಹಿತಿ ಪ್ರಕಾರ ಹಣಕಾಸಿನ ವ್ಯವಹಾರವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ




