ಬಂಧಿಸಲು ಕೇರಳದಿಂದ ಬಂದಿದ್ದ ಪೊಲೀಸರಿಗೆ ಆಟಿಕೆ ಪಿಸ್ತೂಲ್ ತೋರಿಸಿ ಬೆದರಿಕೆ: ಡ್ರಗ್ಸ್ ಪೆಡ್ಲರ್‌ನ ಬಂಧನ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲು ಕೇರಳದಿಂದ ಬಂದಿದ್ದ ಪೊಲೀಸರಿಗೆ ನಕಲಿ ಪಿಸ್ತೂಲ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್‌ನನ್ನು ಎಚ್‌ಎಸ್‌ಆರ್ ಲೇಔಟ್ ಪೊಲೀಸರ ಸಹಾಯದಿಂದ ಕೇರಳದಲ್ಲಿ ಬಂಧಿಸಲಾಗಿದೆ.
ಕೇರಳದ ಕುರುತಿಕಾಡ್ ನಿವಾಸಿ ಜಾಫರ್(32) ಬಂಧಿತ. ಈತ ಯಾರಿಗೆ ಡ್ರಗ್ಸ್ ಪೂರೈಕೆ ಮಾಡಲು ಬಂದಿದ್ದ ಎಂಬ ಬಗ್ಗೆ ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದರು.




