March 19, 2026

ಕಲ್ಲಡ್ಕ: ಹಿರಿಯ ಉದ್ಯಮಿ, ಪನಾಮಾ ಸಮೂಹ ಸಂಸ್ಥೆಗಳ ಸ್ಥಾಪಕ ಮುಹಮ್ಮದ್ ಪನಾಮಾ ನಿಧನ

0
image_editor_output_image836020748-1662732392970

ಬಂಟ್ವಾಳ: ಪನಾಮಾ ಸಮೂಹ ಸಂಸ್ಥೆಗಳ ಸ್ಥಾಪಕ, ಹಿರಿಯ ಉದ್ಯಮಿ ಕಲ್ಲಡ್ಕ ಮುಹಮ್ಮದ್ ಪನಾಮಾ (76) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಮಧ್ಯಾಹ್ನ ತಮ್ಮ ಸ್ವ ಗೃಹದಲ್ಲಿ ನಿಧನರಾದರು. 

ಪನಾಮಾ ಸಮೂಹ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉದ್ಯಮದಲ್ಲಿ ಹೆಸರುವಾಸಿಯಾದ ಅವರು, ಕಲ್ಲಡ್ಕ ಜಮಾಅತ್ ಕಮಿಟಿಯಲ್ಲೂ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದ ಅವರು, ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಅವರು ಪತ್ನಿ, ನಾಲ್ವರು ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಕಲ್ಲಡ್ಕ ಜಮಾಅತ್ ಕಮಿಟಿ, ಎಸ್.ಡಿ.ಪಿ.ಐ. ಕಲ್ಲಡ್ಕ ಬ್ಲಾಕ್, ಪಿ.ಎಫ್.ಐ. ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಕುಂಪನಮಜಲು ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು, ನಾಲ್ವರು ಪುತ್ರರು ಮತ್ತು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಸುಮಾರು 50 ವರ್ಷಕ್ಕೂ ಹೆಚ್ಚಿನ ಅನುಭವವನ್ನು ಅವರು ಹೊಂದಿದ್ದರು. ಹಲವು ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!