March 21, 2026

ಹುಟ್ಟಿದ ಮಗುವನ್ನು ಮುಸ್ಲಿಂ ದಂಪತಿಗೆ ನೀಡಿದ ಹಿಂದೂ ಮಹಿಳೆ: ಸಂಘಪರಿವಾರದಿಂದ ಬೆದರಿಕೆ, ಆಸ್ಪತ್ರೆಗೆ ಬೀಗ ಹಾಕಿದ ಪೊಲೀಸರು

0
image_editor_output_image298725933-1662788731156.jpg

ಲಕ್ನೋ: ಮಹಿಳೆಯೊಬ್ಬರು ಜನ್ಮ ನೀಡಿದ ನವಜಾತ ಶಿಶುವನ್ನು ಮತ್ತೊಂದು ದಂಪತಿಗೆ ಹಸ್ತಾಂತರಿಸಿದ ಆರೋಪದ ಮೇಲೆ ಸಂಘಪರಿವಾರ ಆಕ್ರೋಶ ವ್ಯಕ್ತಪಡಿಸಿದ್ದು, ಶಹಜಹಾನ್‌ಪುರದ ಖಾಸಗಿ ಆಸ್ಪತ್ರೆಯನ್ನು ಸ್ಥಳೀಯ ಅಧಿಕಾರಿಗಳು ಸೀಲ್ ಮಾಡಿದ್ದಾರೆ.

ಮಹಿಳೆಯೊಬ್ಬರ ಶಿಶುವನ್ನು ಮುಸ್ಲಿಂ ದಂಪತಿಗೆ ನೀಡಲಾಗಿತ್ತು. ಇದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಪ್ರತಿಭಟನೆ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ನೋಂದಣಿಯಾಗದ ಕಾರಣ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಡಾ.ಆರ್.ಕೆ.ಗೌತಮ್ ಸ್ಪಷ್ಟಪಡಿಸಿದ್ದಾರೆ. 

ನಿಗೋಹಿ ಪೊಲೀಸ್ ಠಾಣೆ ವ್ಯಾಪ್ತಿಯ ಟ್ರಾಲೋಕ್‌ಪುರ ಗ್ರಾಮದ ನಿವಾಸಿ ಸಂಗೀತಾ ಬುಧವಾರ ರಾತ್ರಿ ಹೆರಿಗೆ ನೋವಿನಿಂದ ಶಹಜಹಾನ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

ಇಲ್ಲಿ ಸಂಗೀತಾ ಎಂಬ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಂಗೀತಾ ಅವರಿಗೆ ಈಗಾಗಲೇ ಐದು ಹೆಣ್ಣು ಮಕ್ಕಳಿರುವುದರಿಂದ ಆರನೆಯ ಮಗುವನ್ನು ನೋಡಿಕೊಳ್ಳಲು ಅಥವಾ ಆಸ್ಪತ್ರೆಯ ಶುಲ್ಕವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಆ ಮಗುವನ್ನು ಮುಸ್ಲಿಂ ದಂಪತಿಗೆ ಹಸ್ತಾಂತರಿಸಲಾಗಿತ್ತು ಎಂದು ಆಸ್ಪತ್ರೆಯ ಮಾಲೀಕ ಡಾ. ಅಶೋಕ್ ರಾಥೋಡ್ ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!